ಈ ಚುನಾವಣೆ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆಲ್ಲ ನಾನು ಬೇಜಾರು, ಕೋಪ ಏನು ಮಾಡ್ಕೊಳಲ್ಲ ಅಂತ ಮೊದಲೇ ಹೇಳಿದ್ದೇನೆ, ಅದೇ ರೀತಿ ನನ್ನ ಪ್ರೀತಿಯ ಅಭಿಮಾನಿಗಳು ಸಹ ಏನೇ ಹೇಳಿದರೂ ಅದರ ವಿರುದ್ಧ ಪೋಸ್ಟ್ ಮಾಡುವುದಾಗಲಿ, ವಿಡಿಯೋ ಗಳಾಗಲಿ ಮಾಡುವ ಗೋಜಿಗೆ ಹೋಗಬೇಡಿ. ಅವೆಲ್ಲದಕ್ಕೂ ಕಿವಿ ಕೊಡದೆ ಶಾಂತಿ ಕಾಪಾಡಿಕೊಂಡು ಆರಾಮಾಗಿರಬೇಕಾಗಿ ನಿಮ್ಮ ನಲ್ಮೆಯ ದಾಸನ ಕಳಕಳಿಯ ವಿನಂತಿ